ಪಣಂಬೂರು ಬೀಚ್ ನಲ್ಲಿ ಇಂಡಿಯನ್ ಓಪನ್ ಆಫ್ ಸರ್ಫಿಂಗ್ -2022ಗೆ ಚಾಲನೆ

Prasthutha|

ಮಂಗಳೂರು: ಪಣಂಬೂರು ಬೀಚ್ ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಗೆ ಶುಕ್ರವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಎನ್ ಎಂಪಿಟಿ ಅಧ್ಯಕ್ಷ ಎವಿ ರಮಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ದ.ಕ. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ, ಇಂಡಿಯನ್ ಸರ್ಫಿಂಗ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಗೌರವ್ ಹೆಗ್ಡೆ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ 70ಕ್ಕೂ ಹೆಚ್ಚಿನ ಸ್ಪರ್ಧಾಳುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.



Join Whatsapp