ಅಂಗನವಾಡಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಸದಿರಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ವಾರ್ನಿಂಗ್

Prasthutha|

ಬೆಂಗಳೂರು: ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ (ICDS) ಮೂಲಕ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಕಳಪೆ ಗುಣಮಟ್ಟದ ಆಹಾರವನ್ನು ತಕ್ಷಣ ನಿಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಸಂಗೀತ ಗದಗಿನ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅ ಪೌಷ್ಟಿಕಾಂಶದಿಂದ ಕೂಡಿದ ಮತ್ತು ಆಹಾರ ಮಾನದಂಡಕ್ಕೆ ಯೋಗ್ಯವಲ್ಲದ ಆಹಾರ ಉತ್ಪನ್ನಗಳನ್ನು ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಬಾರದು. ಕೇಂದ್ರ ಸರ್ಕಾರದ ಆಹಾರ ಮಾನದಂಡಗಳ ಅನುಗುಣವಾಗಿ ಮಾತ್ರವೇ ಆಹಾರ ಪೂರೈಕೆ ನಡೆಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ಜರುಗಿಸಬೇಕು. ICDS ಯೋಜನೆಯನ್ನು ರಾಜ್ಯದೆಲ್ಲೆಡೆ ಜಾರಿಗೊಳಿಸಬೇಕು ಎಂದು ಪೀಠ ಆದೇಶದಲ್ಲಿ ಸೂಚಿಸಿದೆ.

- Advertisement -

ಕೊರೊನಾದಿಂದಾಗಿ ICDS ಯೋಜನೆಯ ಫಲಾನುಭವಿಗಳಾ ಪರಿಸ್ಥಿತಿ ಹೀನಾಯವಾಗಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಪೌಷ್ಟಿಕಾಂಶದ ಆಹಾರವನ್ನು ಪೂರೈಸುವಂತೆ ನ್ಯಾಯಪೀಠ ಕಟ್ಟುನಿಟ್ಟಿನ ತಾಕೀತು ಮಾಡಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಲಕ್ಷ್ಮಿ ಅಯ್ಯಂಗಾರ್, ಎ.ಎಸ್. ಪೊನ್ನಣ್ಣ ವಾದಿಸಿದ್ದರು.



Join Whatsapp