ಚಂಡೀಗಢ: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರಿಗೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ಗುಂಡು ಹಾರಿಸಿದ ಘಟನೆ ರಾಜ್ಯದ ಮಾನ್ಸಾ ಜಿಲ್ಲೆಯಲ್ಲಿ ಭಾನುವಾರ ನಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಅಧಿಕ ರಕ್ತಸ್ರಾವದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಇತರೆ ಇಬ್ಬರು ಗಾಯಗೊಂಡಿದ್ದಾರೆ. ಪಂಜಾಬ್ ಸರ್ಕಾರ ಮೂಸೆವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಮೂಸೆವಾಲಾ ಮತ್ತು ಅವರ ಇಬ್ಬರು ಸ್ನೇಹಿತರು ಪಂಜಾಬ್‌ನ ತಮ್ಮ ಗ್ರಾಮವಾದ ಮಾನ್ಸಾಗೆ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್‌ಗೆ ಸೇರಿದ್ದರು. 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸಿಧು ಮೂಸೆವಾಲಾ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಮಾನ್ಸಾದಿಂದ ಸ್ಪರ್ಧಿಸಿದ್ದರು. ಅವರು ಆಮ್ ಆದ್ಮಿ ಪಕ್ಷದ ಡಾ.ವಿಜಯ್ ಸಿಂಗ್ಲಾ ವಿರುದ್ಧ ಸೋಲು ಕಂಡಿದ್ದರು.