ಡಿವೈಡರ್ ಗೆ ಸ್ಕೂಟರ್ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ- ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Prasthutha|

ಮಂಗಳೂರು: ವೇಗವಾಗಿ ಬಂದ ಸ್ಕೂಟರ್ ಒಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಗಾಯಗೊಂಡ ಗಣೇಶ್ ಮತ್ತು ಧೀರಜ್ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸವಾರ ಹಾಗೂ ಸಹ ಸವಾರ ರಸ್ತೆಗೆ ಎಸೆಯಲ್ಪಟ್ಟಿರುವುದು, ಸ್ಕೂಟರ್ 50 ಮೀಟರ್ ದೂರದಲ್ಲಿ ಬಿದ್ದಿರುವುದು ಸೆರೆಯಾಗಿದೆ.

ಬಿಕರ್ನಕಟ್ಟೆಯ ಮಸೂದ್ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಎದುರುಗಡೆಯ ಉಸ್ಮಾನಿಯಾ ಕಾಂಪ್ಲೆಕ್ಸ್ ಬಳಿ ಈ ಅವಘಡ ಸಂಭವಿಸಿದೆ. ಗಣೇಶ್ ತನ್ನ ಸ್ನೇಹಿತ ಧೀರಜ್ ನನ್ನು ಸ್ಕೂಟರ್ ನಲ್ಲಿ ಕರೆದುಕೊಂಡು ಬಿಕರ್ನಕಟ್ಟೆ ಕೈಕಂಬ ಕಡೆಯಿಂದ ನಂತೂರು ಬಳಿಯ ರಾಷ್ಟ್ರೀಯ ಹೆದ್ದಾರಿ 73ರ ಡಾಮಾರು ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತಕ್ಷಣ ಆಟೋದಲ್ಲಿ ಹೋಗುತ್ತಿದ್ದ ಪ್ರವೀಣ್ ಕುಮಾರ್ ಮತ್ತು ಇತರರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

ಸಂಚಾರ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.



Join Whatsapp