ಕೊಡಗು: ಬುರ್ಖಾ ಡ್ಯಾನ್ಸ್ ವಿರುದ್ಧ ಮುಸ್ಲಿಂ ಮುಖಂಡರ ಅಕ್ರೋಶ

Prasthutha|

ಮಡಿಕೇರಿ: ರಾಜ್ಯದಲ್ಲಿ ಹಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಿಜಾಬ್ ವಿವಾದದ, ಬೆನ್ನಲ್ಲೇ ಇದೀಗ ನಾಪೋಕ್ಲು ವಿನ ಕೊಳಕೇರಿ ಗ್ರಾಮದಲ್ಲಿ ಬುರ್ಖಾ ಹಾಕಿ ಕೆಲ ಯುವಕರು ನೃತ್ಯ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

- Advertisement -

ಕೊಳಕೇರಿ ಗ್ರಾಮಾಭಿವೃದ್ದಿ ಸಂಘದ ವಜ್ರಮಹೋತ್ಸವ ಆಚರಣೆಯ ವೇಳೆ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಕೆಲ ಯುವಕರು ಬುರ್ಖಾ ಹಾಕಿ ಕೊಡವ ವಾಲಗಕ್ಕೆ ನೃತ್ಯ ಮಾಡಿದ್ದರು.

ಸದ್ಯ ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಧಾರ್ಮಿಕ ಉಡುಪುಗಳಿಗೆ ಅಪಮಾನ ಮಾಡಲಾಗಿದೆ ಎಂದು ಜಿಲ್ಲೆಯ ಮುಸ್ಲಿಂ ಸಮುದಾಯದ ಮುಖಂಡರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ   ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Join Whatsapp