ಇಂಧನ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರತಿಭಟನೆ: ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

Prasthutha|

ಚೆನ್ನೈ : ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿಮೆಗೊಳಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿರುವ ರಾಜ್ಯ ಸಚಿವಾಲಯಕ್ಕೆ ಪ್ರತಿಭಟನಾ ಜಾಥಾ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಮತ್ತು 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ತಮಿಳುನಾಡು ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

- Advertisement -

ಅಣ್ಣಾಮಲೈ ಅವರೊಂದಿಗೆ 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮಂಗಳವಾರ ರಾಜ್ಯ ಸಚಿವಾಲಯದತ್ತ ಪಾದಯಾತ್ರೆ ನಡೆಸಿದ್ದರು.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಭರವಸೆ ನೀಡಿತ್ತು. ರಾಜ್ಯ ಸರ್ಕಾರ ಈ ಭರವಸೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದರು.



Join Whatsapp