ಸಿದ್ದು ಬಣದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ಡಿಕೆಶಿಯೂ ಕಾಂಗ್ರೆಸ್ ತ್ಯಜಿಸುವ ದಿನಗಳು ದೂರವಿಲ್ಲ: ನಾಯಕರ ರಾಜೀನಾಮೆಯ ಕುರಿತು ಬಿಜೆಪಿ ವ್ಯಂಗ್ಯ

Prasthutha|

►► ನಿಮ್ಮದು ಭಾರತ್ ಜೋಡೋ ಅಭಿಯಾನವೋ, ಕಾಂಗ್ರೆಸ್ ಛೋಡೋ ಅಭಿಯಾನವೋ?

- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕರ ಸಾಲು ಸಾಲು ರಾಜೀನಾಮೆಯ ಕುರಿತು ವ್ಯಂಗ್ಯವಾಡಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್ಸಿಗರೇ ನಿಮ್ಮದು ಭಾರತ್ ಜೋಡೋ ಅಭಿಯಾನವೋ, #ಕಾಂಗ್ರೆಸ್ ಛೋಡೋ ಅಭಿಯಾನವೋ? ಎಂದು ಪ್ರಶ್ನಿಸಿದೆ.


ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿರುವ ಬಿಜೆಪಿ, ಪರಿಷತ್ ಟಿಕೆಟ್, ರಾಜ್ಯಸಭಾ ಟಿಕೆಟ್, ಪದಾಧಿಕಾರಿಗಳ ಪಟ್ಟಿ ಹೀಗೆ ಪಕ್ಷದ ವಿಚಾರದಲ್ಲಿ ಸಿದ್ದರಾಮಯ್ಯ ಛಾಪು ಎದ್ದು ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಬಣದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ಮುಂದೊಂದು ದಿನ ಕಾಂಗ್ರೆಸ್ ತ್ಯಜಿಸಬಹುದಾದ ದಿನ ದೂರವೇನು ಇಲ್ಲ. ಎಚ್ಚರ ಡಿಕೆಶಿ ಎಚ್ಚರ ಎಂದು ಹೇಳಿದೆ.

- Advertisement -


ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ? ಅಭಿಯಾನದ ಮೂಲಕ ಕಾಂಗ್ರೆಸ್ ಸೇರಿದವರ ಸಂಖ್ಯೆ ಹೆಚ್ಚೋ ಅಥವಾ ಕಾಂಗ್ರೆಸ್ ತ್ಯಜಿಸಲಿರುವವರ ಸಂಖ್ಯೆ ಹೆಚ್ಚೋ? ಎಂದು ಪ್ರಶ್ನಿಸಿದೆ. ಡಿಜಿಟಲ್ ಅಭಿಯಾನದಲ್ಲಿ ಲಕ್ಷ ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ ಎಂದು ಅಂಕೆ-ಸಂಖ್ಯೆ ಬಿಡುಗಡೆ ಮಾಡಿದ ಡಿಕೆಶಿಯವರೇ, ಈಗ ಅನೇಕರು ಪಕ್ಷ ತ್ಯಜಿಸುತ್ತಿದ್ದು, ನಾಳೆ ನಡೆಯಲಿರುವ ರಾಜ್ಯ ಚಿಂತನ ಶಿಬಿರದಲ್ಲಿ ಮುಂದೆ ಪಕ್ಷ ತ್ಯಜಿಸುವವರಿಗಾಗಿ ಹೊಸ ಅಭಿಯಾನ ಘೋಷಿಸುತ್ತೀರಾ ಎಂದು ಕುಹಕವಾಡಿದೆ.


ಕಪಿಲ್ ಸಿಬಲ್, ಆರ್ ಪಿಎನ್ ಸಿಂಗ್, ಅಶ್ವಿನಿ ಕುಮಾರ್, ಹಾರ್ದಿಕ್ ಪಟೇಲ್, ಸಿಎಂ ಇಬ್ರಾಹಿಂ, ಪ್ರಮೋದ್ ಮಧ್ವರಾಜ್, ಮುಖ್ಯಮಂತ್ರಿ ಚಂದ್ರು ಈಗ ಬ್ರಿಜೇಶ್ ಕಾಳಪ್ಪ. ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್ ಜೋಡೋ ಅಭಿಯಾನವೋ, ಅಥವಾ ಕಾಂಗ್ರೆಸ್ ಛೋಡೋ ಅಭಿಯಾನವೋ? ಎಂದು ವ್ಯಂಗ್ಯವಾಡಿದೆ.


ಮತ್ತೊಂದು ಟ್ವೀಟ್ ನಲ್ಲಿ, ಕಾಂಗ್ರೆಸ್ ಪಕ್ಷ ಯಾವ ದಯನೀಯ ಸ್ಥಿತಿ ತಲುಪಿದೆ ಎಂದರೆ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಸಂಖ್ಯೆ ತೋರಿಸಲು ಟಿವಿ, ಫ್ರಿಡ್ಜ್, ಫೋನ್ ಆಮಿಷ ಒಡ್ಡಲಾಗಿತ್ತು. ಈಗ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕೆ ದುಡಿದವರು ಪಕ್ಷ ತ್ಯಜಿಸುತ್ತಿದ್ದಾರೆ. ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾರ್ಯಕರ್ತರೇ ಬೇಸತ್ತಿದ್ದಾರೆ ಎಂದು ಆರೋಪಿಸಿದೆ.



Join Whatsapp