ಗಾಯಕ ಮೂಸೆವಾಲಾ ಹತ್ಯೆ | ನಕಲಿ ಎನ್ಕೌಂಟರ್’ನಿಂದ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದ ಆರೋಪಿ ಲಾರೆನ್ಸ್ ಬಿಷ್ಣೋಯ್

Prasthutha|

ಅಮೃತಸರ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿತ ಗ್ಯಾಂಗ್’ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ದೆಹಲಿ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಪಂಜಾಬ್ ಪೊಲೀಸರು ತನ್ನನ್ನು ನಕಲಿ ಎನ್ಕೌಂಟರ್ ಮಾಡುವ ಸಾಧ್ಯೆತೆಯಿದ್ದು, ರಕ್ಷಣೆ ಒದಗಿಸುವಂತೆ ಕೋರಿ ದೆಹಲಿ ಹೈಕೋರ್ಟ್’ಗೆ ಅವರು ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್’ಗೆ ಅರ್ಜಿ ಸಲ್ಲಿಸುವ ನಿಟ್ಟಿನಲ್ಲಿ ನ್ಯಾಯಾಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠಕ್ಕೆ ಸಲ್ಲಿಸಿದ್ದ ಈ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ.

- Advertisement -

ಲಾರೆನ್ಸ್ ಬಿಷ್ಣೋಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.



Join Whatsapp