ಶಿಕ್ಷಣ ಸಚಿವ ನಾಗೇಶ್ ನಿವಾಸಕ್ಕೆ NSUI ಕಾರ್ಯಕರ್ತರಿಂದ ಮುತ್ತಿಗೆ | 15 ಮಂದಿ ವಶಕ್ಕೆ: ಆರಗ ಜ್ಞಾನೇಂದ್ರ

Prasthutha|

ತುಮಕೂರು: ಶಿಕ್ಷಣ ಸಚಿವ ನಾಗೇಶ್ ಅವರ ನಿವಾಸದ ಮೇಲೆ NSUI ಕಾರ್ಯಕರ್ತರು ಮುತ್ತಿಗೆ ಹಾಕಿ ದಾಳಿ ಪ್ರಯತ್ನ ನಡೆಸಿದ ಘಟನೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಎರಡು ವಾಹನ ಗಳಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ತಿಪಟೂರಿನ ಸಚಿವರ ನಿವಾಸ ದ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು ಇದುವರೆಗೆ NSUI ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ರನ್ನು ಒಳಗೊಂಡಂತೆ ಒಟ್ಟು 15 ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ದುಷ್ಕರ್ಮಿಗಳು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದು ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ.

- Advertisement -

ನೆಲೆ ಕಳೆದುಕೊಂಡ ಕಾಂಗ್ರೆಸ್ ಪಕ್ಷ ಇಂಥ ನೀಚ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದು, ನಾಡಿನ ಜನತೆ ಕ್ಷುಲ್ಲಕ ಹಾಗೂ ಗೂಂಡಾ ರಾಜಕಾರಣವನ್ನು ಸಹಿಸುವುದಿಲ್ಲ ಎಂದಿದ್ದಾರೆ. ತಿಪಟೂರಿನ ಸಚಿವರ ನಿವಾಸಕ್ಕೆ ಭೇಟಿ ನೀಡುವುದಾಗಿಯೂ ಸಚಿವರು ತಿಳಿಸಿದರು.



Join Whatsapp