ಲಖನೌ: ಸಂಘಪರಿವಾರದ ಮುಖಂಡರಾದ ಯತಿ ನರಸಿಂಹಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ದ್ವೇಷ ಹರಡುವವರು ಎಂದು ಟ್ವೀಟ್ ಮಾಡಿದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಝುಬೈರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಹಿಂದೂ ಶೇರ್ ಸೇನೆಯ ಜಿಲ್ಲಾ ಮುಖ್ಯಸ್ಥ ಭಗವಾನ್ ಶರಣ್ ಅವರು ನೀಡಿದ ದೂರಿನ ಆಧಾರದಲ್ಲಿ ಪತ್ರಕರ್ತ ಝುಬೈರ್ ಮೇಲೆ ಐಪಿಸಿ ಸೆಕ್ಷನ್ 295 ಎ, 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.