ಬೆಂಗಳೂರು: ಒಬ್ಬ ಅನಾರೋಗ್ಯವನ್ನು ಹೀಯಾಳಿಸುವ ವಿಕೃತ ಮನಸ್ಥಿತಿ ಇರುವುದು ಬಿಜೆಪಿ ಪಕ್ಷಕ್ಕೆ ಮಾತ್ರ ಎಂದು ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಟ್ವಿಟರ್ ಖಾತೆಯಲ್ಲಿ ವ್ಯಂಗ್ಯವಾಗಿ ಟ್ವೀಟ್ ಮಾಡಿತ್ತು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಸಿಡಿ’ ಪಕ್ಷವು ‘ಇಡಿ’ಯನ್ನು ಛೂ ಬಿಟ್ಟರೆ ಹೆದರುವವರು ಯಾರೂ ಇಲ್ಲ. ಹಾಗೆಯೇ ಕೋವಿಡ್ ವರದಿ ನೀಡುವುದು. ನಿಮ್ಮದೇ ಸರ್ಕಾರದ ವ್ಯವಸ್ಥೆ ಎಂಬುದು ನೆನಪಿರಲಿ. SIT ತನಿಖೆ ತಪ್ಪಿಸಲು ರಮೇಶ್ ಜಾರಕಿಹೊಳಿಯ ಕೋವಿಡ್ ಸೋಂಕಿನ ನಾಟಕವನ್ನು ರಾಜ್ಯ ಕಂಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.