ಅಕ್ರಮ ಹಣ ವರ್ಗಾವಣೆ ಪ್ರಕರಣ | ಜೂನ್ 13ಕ್ಕೆ ವಿಚಾರಣೆಗೆ ಬರುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜೂನ್ 13 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಇಡಿ ಇಲಾಖೆ ಹೊಸ ಸಮನ್ಸ್ ಜಾರಿ ಮಾಡಿದೆ.

- Advertisement -

ಜೂನ್ 2 ರಂದು ವಿಚಾರಣೆಗೆ ಬರುವಂತೆ ನೀಡಲಾಗಿದ್ದ ಸಮನ್ಸ್’ಗೆ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಬರಲು ಸಾಧ್ಯವಿಲ್ಲ. ಜೂನ್ 5 ರ ನಂತರದ ಯಾವುದೇ ದಿನಾಂಕವನ್ನು ನೀಡುವಂತೆ ಕೇಳಿದ್ದರು.

ಜೂನ್ 8 ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ.

- Advertisement -

ಇಡಿ ಇಲಾಖೆಯ ನಡೆ ಸೇಡಿನ ರಾಜಕೀಯದ ಇನ್ನೊಂದು ಮುಖ ಎಂದು ಕಾಂಗ್ರೆಸ್ ಬಣ್ಣಿಸಿದ್ದು, ಯಾವುದೇ ಒತ್ತಡದ ಮುಂದೆ ತಲೆಬಾಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.



Join Whatsapp