ಹೈದರಾಬಾದ್: ಮರ್ಸಿಡಿಸ್ ಬೆಂಜ್ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಐವರು ಹದಿಹರೆಯದ ಯುವಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಹೈದಾರಾಬಾದ್ ನಲ್ಲಿ ನಡೆದಿದೆ.
ಶಾಸಕರೊಬ್ಬರ ಪುತ್ರ ಕೂಡಾ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಕಳೆದ ಶನಿವಾರ ನಡೆದಿದ್ದು, ನಂತರ ಈ ಶುಕ್ರವಾರ ಬೆಳಕಿಗೆ ಬಂದಿದೆ. ಸಂತ್ರಸ್ತೆ ಬಾಲಕಿಯ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.