ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಪರಿಷ್ಕೃತ ಪಠ್ಯ ಜಾರಿ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಒಕ್ಕಲಿಗ ಸಂಘ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳು ಎಚ್ಚರಿಸಿದೆ
ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಹಿನ್ನೆಲೆ ಮಾತಾದ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ.ಟಿ.ಎಚ್.ಆಂಜನಪ್ಪ, ರಾಜ್ಯ ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮುಗಿದ ಹಿನ್ನೆಲೆ ಆ ಸಮಿತಿಯನ್ನು ವಿಸರ್ಜನೆ ಮಾಡಿದೆ. ಆದರೆ, ಕುವೆಂಪು ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ವಿರುದ್ಧ ಯಾವುದೇ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿಲ್ಲ. ಆತನನ್ನು ಬಂಧಿಸಿ, ಕಾನೂನು ಕ್ರಮ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ
ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಠ್ಯವು ಸಂಪೂರ್ಣ ಬ್ರಾಹ್ಮಣೀಕರಣವಾಗಿದೆ ಅವುಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಅಲ್ಲಿಯವರೆಗೂ ಒಕ್ಕಲಿಗರು, ಪ್ರಗತಿಪರರ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.