ತುಮಕೂರು: ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಕ್ಕದಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಹೊರ ವಲಯದ ಹೇರೂರು ಬೈಪಾಸ್ ನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಕಾರು ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ತೆರಳುತ್ತಿತ್ತು. ಹಾಗೆಯೇ ರಸ್ತೆ ಡಿವೈಡರ್ ದಾಟಿ ಹಾಸನ ಕಡೆಯಿಂದ ಟಿಟಿ ವಾಹನ ಬರುತ್ತಿತ್ತು. ಈ ವೇಳೆ ಕಾರು ಹಾಗೂ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.