ವಡೋದರಾ: ತನ್ನನ್ನು ತಾನೇ ವಿವಾಹ ಮಾಡಿಕೊಳ್ಳುವುದಾಗಿ ಘೋಷಿಸಿ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಗುಜರಾತ್ ಮೂಲದ ಕ್ಷಮಾ ಬಿಂದು ಎಂಬ ಯುವತಿ ಮದುವೆಗೆ ಇದೀಗ ಅಡ್ಡಿ ಎದುರಾಗಿದೆ.
ವಡೋದರಾದ ಬಿಜೆಪಿ ನಗರ ಘಟಕದ ಉಪ ಮುಖ್ಯಸ್ಥೆ ಸುನೀತಾ ಶುಕ್ಲಾ ಅವರು ಕ್ಷಮಾ ಬಿಂದು ನಿರ್ಧಾರಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಕ್ಷಮಾ ಬಿಂದು ದೇವಸ್ಥಾನದಲ್ಲಿ ಮದುವೆಯಾಗುವುದಾದರೆ, ನಾವು ಅವಳನ್ನು ಹಾಗೆ ಮಾಡಲು ಬಿಡುವುದಿಲ್ಲ. ಇಂತಹ ವಿವಾಹಗಳು ಹಿಂದೂ ಧರ್ಮಕ್ಕೆ ವಿರುದ್ಧವಾಗಿವೆ. ಬಿಂದು ಮಾನಸಿಕ ಅಸ್ವಸ್ಥೆ ಎಂದು ಸುನೀತಾ ಶುಕ್ಲಾ ಹೇಳಿದ್ದಾರೆ.
ಸ್ವಯಂ ವಿವಾಹಕ್ಕೆ ದೇವಸ್ಥಾನದಲ್ಲಿ ಅವಕಾಶವಿಲ್ಲವೆಂದ ಬಿಜೆಪಿ !
Prasthutha|