ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚಡ್ಡಿ ಸುಟ್ಟು ಪ್ರತಿಭಟಿಸುವ ಎಚ್ಚರಿಕೆ ನೀಡಿದ ಹೇಳಿಕೆಯು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷವಾಗಿ ಬದಲಾಗಿದ್ದು, ಚಡ್ಡಿಗೆ ಬೆಂಕಿ ಬೆಂಕಿ ಬಿದ್ದರೆ ಈಶ್ವರಪ್ಪನವರ ಬುಡ ಸಿಡಿಯುತ್ತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈಶ್ವರಪ್ಪ ಹೇಳಿಕೆಗೆ ಟ್ವೀಟ್ ಮೂಲಕ ತೀಕ್ಷ್ಣವಾಗಿ ತಿರುಗೇಟು ನೀಡಿದ ಕಾಂಗ್ರೆಸ್, ‘ಕೆ.ಎಸ್. ಈಶ್ವರಪ್ಪ ಅವರ ಭ್ರಷ್ಟಾಚಾರದ ಬೆಂಕಿ ರಾಜ್ಯವನ್ನಷ್ಟೇ ಅಲ್ಲ, ಗುತ್ತಿಗೆದಾರರ ಬದುಕನ್ನೇ ಸುಟ್ಟಿದೆ. ‘ಚಡ್ಡಿ’ಅಂದರೆ ಬಿಜೆಪಿಗರಿಗೆ ಏಕಿಷ್ಟು ಅಮರಪ್ರೇಮ? ಚಡ್ಡಿಗೆ ಬೆಂಕಿ ಬಿದ್ದರೆ ಈಶ್ವರಪ್ಪನವರ ಬುಡ ಚಟಪಟ ಸಿಡಿಯುತ್ತಿರುವುದೇಕೆ? ಚಡ್ಡಿಗೆ ಬಿಜೆಪಿ ಪೇಟೆಂಟ್ ಇದೆಯಾ? ಅಥವಾ ಚಡ್ಡಿಯನ್ನೇ ಬಿಜೆಪಿ ಧ್ವಜವನ್ನಾಗಿ ಸ್ವೀಕರಿಸಿದೆಯಾ..? ಎಂದು ಕಿಡಿಕಾರಿದೆ.
ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ, ಚಡ್ಡಿಗೆ ಬೆಂಕಿ ಹಚ್ಚಿ ನೋಡಿ. ನಿಮ್ಮ ಬುಡ ಬೇಯಲಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಚಡ್ಡಿಗೆ ಬೆಂಕಿ ಬಿದ್ದರೆ ಈಶ್ವರಪ್ಪನವರ ಬುಡ ಸಿಡಿಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ.