ಚಿಕ್ಕಮಗಳೂರು : ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಸೇರಿದಂತೆ ಕಾರ್ಯಕರ್ತರ ಬಂಧನವನ್ನು ಖಂಡಿಸಿ ನಗರದ ಆಜಾದ್ ಪಾರ್ಕ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಎನ್.ಎಸ್.ಯು.ಐ. ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆರ್.ಎಸ್.ಎಸ್ ಚಡ್ಡಿ ಸುಟ್ಟು ,ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಠ್ಯಪರಿಷ್ಕರಣೆ ವಿರೋಧಿಸಿ ಇತ್ತೀಚೆಗೆ ತುಮಕೂರಿನಲ್ಲಿ ಸಚಿವ ನಾಗೇಶ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಎನ್ ಎಸ್ ಯುಐ ಕಾರ್ಯಕರ್ತರು ಖಾಕಿ ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇವರ ವಿರುದ್ಧ ಪೊಲೀಸರು ಜಾಮೀನುರಹಿತ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಚಿಕ್ಕಮಗಳೂರಿನಲ್ಲಿ ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.