ಉತ್ತರ ಪ್ರದೇಶ: ಕಾನ್ಪುರ ಹಿಂಸಾಚಾರದ ಪೋಸ್ಟ್’ಗಳನ್ನು ಟ್ವೀಟ್ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ

Prasthutha|

ಕಾನ್ಪುರ: ಕಾನ್ಪುರ ಹಿಂಸಾಚಾರದ ದೃಶ್ಯಗಳನ್ನು ಟ್ವಿಟ್ಟರ್’ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತ, ಮಿಲ್ಲತ್ ಟೈಮ್ಸ್ ಸಂಪಾದಕ ತಬ್ರೇಝ್ ಖಾಸ್ಮಿ ಅವರ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಖಾಸ್ಮಿ ವಿರುದ್ಧ ಐಪಿಸಿ ಸೆಕ್ಷನ್ 505, 507 ಮತ್ತು ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಆರಂಭವಾದ ಗಲಭೆ ಹಿಂಸಾಚಾರಕ್ಕೆ ತಿರುಗಿತ್ತು.



Join Whatsapp