ಮುಂಬೈ: ಟಿವಿ ಚರ್ಚೆವೊಂದರಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಶೀಘ್ರದಲ್ಲೇ ಸಮನ್ಸ್ ಕಳುಹಿಸಲಾಗುವುದೆಂದು ಮುಂಬೈ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಜ್ಞಾನವಾಪಿ ವಿಷಯದ ಕುರಿತು ಸುದ್ದಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ವಿರುದ್ಧ ಮುಂಬೈ ಪೊಲೀಸರು ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ ಎಂದು ತಿಳಿಸಿದ್ದಾರೆ