ಮಂಗಳೂರು: ಯುವಕನ ಮೇಲೆ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ ಘಟನೆ ನಗರದ ಹೊರವಲಯದ ಬೈಕಂಪಾಡಿ ಜಂಕ್ಷನ್ ಬಳಿ ನಡೆದಿದೆ.
ಸೋಮವಾರ ಸಂಜೆ ರಾಘವೇಂದ್ರ ಯಾನೆ ರಾಜ (28) ಎಂಬಾತನನ್ನು ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ರಾಘವೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೂರ್ವದ್ವೇಷದ ಹಿನ್ನೆಲೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.