ನವದೆಹಲಿ | ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ಜಾಮಾ ಮಸೀದಿ ಎದುರು ಪ್ರತಿಭಟನೆ

Prasthutha|

ನವದೆಹಲಿ: ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಶುಕ್ರವಾರದ ಪ್ರಾರ್ಥನೆಯ ಬಳಿಕ ಜಾಮಾ ಮಸೀದಿಯ ಎದುರು ಪ್ರತಿಭಟನೆ ನಡೆದಿದೆ. ಈ ಸಂದರ್ಭದಲ್ಲಿ ನೂರಾರು ಪ್ರತಿಭಟನಾಕಾರರು ಭಿತ್ತಿ ಪತ್ರ ಹಿಡಿದು ನೂಪುರ್ ಶರ್ಮಾ ವಿರುದ್ಧ ಘೋಷಣೆ ಕೂಗಿದ್ದಾರೆ.

- Advertisement -

ಈ ನಡುವೆ ಕೆಲವು ಪ್ರತಿಭಟನಾಕಾರರು ಅಲ್ಪ ಸಮಯದ ಬಳಿಕ ಅಲ್ಲಿಂದ ತೆರಳಿದರೆ, ಅನೇಕರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.



Join Whatsapp