ಬೆಂಗಳೂರು: ಬೆಂಗಳೂರಿನ ಜಯನಗರದ ಸಾರಕ್ಕಿ ಸರ್ಕಲ್ ಬಳಿ ಇಂದು ಯುವತಿಯೋರ್ವಳ ಮೇಲೆ ಅಪರಿಚತನಿಂದ ಟಾಯ್ಲೆಟ್ ಕ್ಲೀನಿಂಗ್ ಅಂಶವಿರುವ ಆ್ಯಸಿಡ್ ಎರಚಿದ ಬಗ್ಗೆ ಸುದ್ದಿ ಮಾಧ್ಯಮದಲ್ಲಿ ವರದಿಯಾಗಿದ್ದು, ಈ ವರದಿಯನ್ನಾಧರಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಳ್ಳಲಾಗಿದೆ.
ಈ ಕುರಿತು ಉಪ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದಾಗ ಆ್ಯಸಿಡ್ನ್ನು ಎರಚಿದ್ದು, ಇದರಿಂದ ಯುವತಿಯ ಮುಖಭಾಗದಲ್ಲಿ ಕೆಂಪಾಗಿದ್ದು, ಕಣ್ಣಿನ ಬಳಿ ಗಾಯವಾಗಿದೆ. ಉತ್ತಮ ಚಿಕಿತ್ಸೆಗೆ ಸೂಚಿಸಲಾಗಿದ್ದು, ಗುಣಮುಖವಾಗುವ ಸಾಧ್ಯತೆಯಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ ಎಂದು ಅಧಿಕಾರಿಯು ತಿಳಿಸಿರುತ್ತಾರೆ.
ಈ ಸಂಬಂಧ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿರುತ್ತೇನೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮಿಳಾ ನಾಯ್ಡು ತಿಳಿಸಿದ್ದಾರೆ.