ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ: ರಾಜ್ಯದಲ್ಲಿ ಕಟ್ಟೆಚ್ಚರ !

Prasthutha|

ಹುಬ್ಬಳ್ಳಿ: ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ಮುಖಂಡೆ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಂಡು ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು ನಿಯಂತ್ರಣದಲ್ಲಿದೆ. ಆದರೂ ಜಾಗೃತವಾಗಿರಬೇಕೆಂದು ತಿಳಿಸಲಾಗಿದೆ. ಪ್ರತಿಯೊಂದು ಠಾಣೆಯ ಸಿಪಿಐ ಅವರನ್ನು ಉಸ್ತುವಾರಿ ಮಾಡಿ, ಎಲ್ಲ ಸಮುದಾಯದವರ ಜತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.



Join Whatsapp