ಪರಿಷತ್ ಚುನಾವಣೆ: ಮತದಾನ ಆರಂಭ, 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Prasthutha|

ಬೆಂಗಳೂರು: ವಿಧಾನ ಪರಿಷತ್ ನ ವಾಯವ್ಯ, ದಕ್ಷಿಣ ಪದವೀಧರರ ಕ್ಷೇತ್ರ ಹಾಗೂ ವಾಯವ್ಯ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಮತದಾನ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಮತಗಟ್ಟೆಗೆ ಮತದಾರರು ಬಂದು ಹಕ್ಕು ಚಲಾಯಿಸುತ್ತಿದ್ದಾರೆ.
607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಲಿದ್ದು, ಜೂನ್ 15 ರಂದು ಮತ ಎಣಿಕೆ ನಡೆಯಲಿದೆ.

- Advertisement -


ಜುಲೈ 4ರಂದು ಬಿಜೆಪಿಯ ಹಣಮಂತ ನಿರಾಣಿ, ಜೆಡಿಎಸ್ ನ ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿಯ ಅರುಣ್ ಶಹಾಪುರ ಮತ್ತು ಮತ್ತು ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರ ಅವಧಿ ಅಂತ್ಯಗೊಳ್ಳಲಿದ್ದು, ಈ ಹಿನ್ನೆಲೆ ಚುನಾವಣೆ ನಡೆಯುತ್ತಿದೆ.
ವಾಯವ್ಯ ಶಿಕ್ಷಕ ಕ್ಷೇತ್ರದ ಚುನಾವಣಾ ಕಣದಲ್ಲಿ ಅರುಣ ಶಹಪುರ (ಬಿಜೆಪಿ), ಪ್ರಕಾಶ್ ಹುಕ್ಕೇರಿ (ಕಾಂಗ್ರೆಸ್) ಮತ್ತು ಚಂದ್ರಶೇಖರ್ ಲೋಣ (ಜೆಡಿಎಸ್) ಇದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ನಿಂಗಪ್ಪ ಬನ್ನೂರು,. ಶ್ರೀಕಾಂತ್ ಪಾಟೀಲ್, ಬಸಪ್ಪ ಮನಿಗಾರ, ಜಯಪಾಲ್ ದೇಸಾಯಿ, ಅಪ್ಪಾಸಾಹೇಬ್ ಕರುಣೆ, ಚಂದ್ರಶೇಖರ್ ಗಡಸಿ, ಸಂಗಮೇಶ್ ಚಿಕ್ಕನರಗುಂದ ಮತ್ತು ಶ್ರೇಣೀಕ್ ಜಾಂಗಟೆ ಕಣದಲ್ಲಿದ್ದಾರೆ.


ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಎಂಎಲ್ ಸಿ ಎಂವಿ ರವಿಶಂಕರ್, ಕಾಂಗ್ರೆಸ್ ನಿಂದ ಮಧು ಜಿ ಮಾದೇಗೌಡ ಮತ್ತು ಜೆಡಿಎಸ್ ನಿಂದ ಎಚ್ ಕೆ ರಾಮು ಕಣದಲ್ಲಿದ್ದಾರೆ.
ಚುನಾವಣೆ ನಡೆಯುವ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.



Join Whatsapp