►ಆರೋಪಿ ರಾಜ್ ಕುಮಾರ್ ಮಳಗಿ ಅರೆಸ್ಟ್
ಬೀದರ್: ಪ್ರವಾದಿ ನಿಂದನೆಯ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಆಕ್ರೋಶವನ್ನು ತಣಿಸಲು ಪೊಲೀಸರು ಪ್ರಯತ್ನಿಸುತ್ತಿರುವುದರ ಮಧ್ಯೆಯೇ ಬೀದರ್ ನ ಬಸವಕಲ್ಯಾಣದಲ್ಲಿ ದುಷ್ಕರ್ಮಿಯೋರ್ವ ಪ್ರವಾದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿ ಗಲಭೆಗೆ ಪ್ರಚೋದನೆ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ. ಆರೋಪಿ ರಾಜ್ ಕುಮಾರ್ ಮಳಗಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಕ್ಷೇಪಾರ್ಹ ಪೋಸ್ಟ್ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮಳಗಿ ಪೊಲೀಸ್ ಠಾಣೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಮುಸ್ಲಿಮ್ ಬಾಂಧವರು ಜಮಾಯಿಸಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದರು.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ರಾಜ್ ಕುಮಾರ್ ಮಳಗಿ ಎಂಬಾತನನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.