ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ 2 ಶಿಕ್ಷಕ ಮತ್ತು 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಲಿದೆ. ಮೂರು ಪಕ್ಷಗಳಿಂದ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದು ಭವಿಷ್ಯ ಇಂದು ಗೊತ್ತಾಗಲಿದೆ. ಬೆಳಗ್ಗೆ ಮೊದಲು ಸಿಂಧು- ಅಸಿಂಧು ಮತಗಳ ಬೇರ್ಪಡಿಕೆ ಕಾರ್ಯ ನಡೆಯಲಿದ್ದು, ಬಳಿಕ ಸಿಬ್ಬಂದಿ ಮತಗಳ ಕ್ರೂಢೀಕರಣ ಮಾಡಲಿದ್ದಾರೆ. ಇದಾದ ಬಳಿಕ 25 ಮತಗಳ ತಲಾ ಒಂದು ಬಂಡಲ್ ಕಟ್ಟಿ ಮತ ಎಣಿಕೆ ನಡೆಯಲಿದೆ.
ದಕ್ಷಿಣ ಪದವೀಧರ ಕ್ಷೇತದ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವಿಗಾಗಿ ಕಾಯುತ್ತಿದ್ದರೆ, ಜೆಡಿಎಸ್ ಸ್ಥಾನ ಉಳಿಸಿಕೊಳ್ಳಲು, ಬಿಜೆಪಿ ಮರಳಿ ಕ್ಷೇತ್ರ ಪಡೆಯಲು ಹವಣಿಸುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಬಸವರಾಜ ಹೊರಟ್ಟಿ ಭವಿಷ್ಯವೂ ಇಂದು ನಿರ್ಧಾರವಾಗಲಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪರ ಹಣ ಹಂಚಿಕೆಯೂ ಜೋರಾಗಿತ್ತು.
ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಲಿದ್ದು, ಎಣಿಕೆ ಕೇಂದ್ರಗಳ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ ಎಣಿಕೆಗಾಗಿ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿ ಆಗಿದೆ.