100 ಗಂಟೆಗಳ ಕಾರ್ಯಾಚರಣೆಯ ನಂತರ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ

Prasthutha|

ಜಂಜಗೀರ್ (ಛತ್ತೀಸ್ ಗಢ): ಜಂಜಗೀರ್-ಚಂಪಾ ಜಿಲ್ಲೆಯ ಪಿಹ್ರಿದ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದ ಛತ್ತೀಸ್ ಗಢದ 11 ವರ್ಷದ ಬಾಲಕ ರಾಹುಲ್ ಸಾಹು ಎಂಬಾತನನ್ನು 100 ಗಂಟೆಗಳ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸಾಹು ಅವರನ್ನು ಮಂಗಳವಾರ ಮಧ್ಯರಾತ್ರಿಯ ಸುಮಾರಿಗೆ ಸುರಕ್ಷಿತವಾಗಿ ಹೊರತೆಗೆಯಲಾಯಿತು.

ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಬಾಲಕನ ಚೇತರಿಕೆಗೆ ಹಾರೈಸಿದ್ದಾರೆ.

- Advertisement -

“ಎಲ್ಲರ ಪ್ರಾರ್ಥನೆ ಮತ್ತು ರಕ್ಷಣಾ ತಂಡದ ಅವಿರತ, ಸಮರ್ಪಿತ ಪ್ರಯತ್ನಗಳೊಂದಿಗೆ, ರಾಹುಲ್ ಸಾಹು ಅವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಅವರು ಆದಷ್ಟು ಬೇಗ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂಬುದು ನಮ್ಮ ಆಶಯ” ಎಂದು ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ಟ್ವೀಟ್ ಮಾಡಿದ್ದಾರೆ.

ರಾಹುಲ್ ಸಾಹು ಮಲ್ಖರೋಡಾ ಬ್ಲಾಕ್ನ ಪಿಹ್ರಿದ್ ಗ್ರಾಮದಲ್ಲಿ 60 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಕ್ಕಿಬಿದ್ದಿದ್ದರು.

ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಮತ್ತು ಜಿಲ್ಲಾಡಳಿತ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸುಮಾರು 150 ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.



Join Whatsapp