ವಾಷಿಂಗ್ಟನ್ : ಭಾರತದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಘಟನೆಗಳ ಬಗ್ಗೆ ದಿ ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯ ಸಂಪಾದಕರ ಮಂಡಳಿ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಪತ್ರಿಕೆಯ ಸಂಪಾದಕೀಯದಲ್ಲಿ ಬರೆಯಲಾಗಿದ್ದು, ಭಾರತದ ಹೆಚ್ಚುತ್ತಿರುವ ಇಸ್ಲಾಮೋಫೋಬಿಯಾವನ್ನು ಯು.ಎಸ್. ವಿರೋಧಿಸಬೇಕು ಎಂದು ತಿಳಿಸಿದೆ.
ಶೇ.79ರಷ್ಟು ಹಿಂದೂ ಬಹುಸಂಖ್ಯಾತರು ಮತ್ತು ಶೇ.15ರಷ್ಟು ಮುಸ್ಲಿಂ ಅಲ್ಪಸಂಖ್ಯಾತರಿದ್ದರೂ ಜಾತ್ಯತೀತ ರಾಷ್ಟ್ರವಾಗಿ ರೂಪುಗೊಂಡ ಭಾರತ, ಬಿಜೆಪಿ ಆಡಳಿತದಲ್ಲಿ ಹಿಂದೂ ರಾಷ್ಟ್ರೀಯತೆಯತ್ತ ವಾಲುತ್ತಿದೆ ಎಂದು ಸಂಪಾದಕೀಯದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.