ಹುಬ್ಬಳ್ಳಿ: ಕಿಮ್ಸ್ ಆವರಣದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣದ ವಿಚಾರವಾಗಿ ಸಂಘಪರಿವಾರದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾನಗರ ಇನ್ಸ್ ಪೆಕ್ಟರ್ ಮಹಾಂತೇಶ ಹೋಳಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ಇನ್ಸ್ ಪೆಕ್ಟರ್ ಮಹಾಂತೇಶ ಹೋಳಿ ಹಾಗೂ ಸಂಘಪರಿವಾರದ ಕಾರ್ಯಕರ್ತ ಮಲ್ಲಿಕಾರ್ಜುನ ಸತ್ತಿಗೇರೆ ನಡುವೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಮಲ್ಲಿಕಾರ್ಜುನ ಸತ್ತಿಗೇರೆ ಇನ್ಸ್ ಪೆಕ್ಟರ್ ಗೆ ಏಕವಚನದಲ್ಲಿ ಅವಾಜ್ ಹಾಕಿದ್ದನು. ಬಳಿಕ ಆತ ತನ್ನನ್ನು ಠಾಣೆಗೆ ಕರೆಯಿಸಿ ಇನ್ಸೆಪೆಕ್ಟರ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದನು.