ಕಲ್ಕತ್ತಾ: ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ನಿಂದನೆಯ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿ 280 ಮಂದಿಯನ್ನು ಬಂಧಿಸಲಾಗಿದೆ ಎಂದು ಪ.ಬಂಗಾಳ ಸರಕಾರ ಕಲ್ಕತ್ತಾ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. ಬಂಧಿತರಲ್ಲಿ 99 ಮಂದಿ ಹೌರಾ ಜಿಲ್ಲೆಗೆ ಸೇರಿದವರು ಎಂದು ವರದಿಯಲ್ಲಿ ತಿಳಿಸಿದೆ.
ಎನ್‌ಐಎ ತನಿಖೆ ಮತ್ತು ಕೇಂದ್ರ ಸಶಸ್ತ್ರ ಪಡೆಗಳ ನಿಯೋಜನೆ ಕುರಿತು ತನ್ನ ಆದೇಶವನ್ನು ಕಾಯ್ದಿರಿಸಿದ ವಿಭಾಗೀಯ ಪೀಠ, ಕೇಂದ್ರ ಸಶಸ್ತ್ರ ಪಡೆಗಳ ನಿಯೋಜನೆ ಅಗತ್ಯವಿದೆಯೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು ಎಂದು ಆದೇಶಿಸಿತು.