ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮೂರು ದಿನಗಳ ಮೂವತ್ತು ಗಂಟೆ ವಿಚಾರಣೆ ಬಳಿಕವೂ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.
ವಿಚಾರಣೆಯ ಮೊದಲ ದಿನ ಸೋಮವಾರದಿಂದ ಸುಮಾರು 30 ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ. ಗುರುವಾರ 1 ದಿನದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಸಂಸದರು ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆಯ 3 ದಿನವೂ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿಯನ್ನು ಬೆಂಬಲಿಸಿ ವಿಚಾರಣೆ ವೇಳೆ ಇಡಿ ಕಚೇರಿಯ ಹೊರಗಡೆ ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಮಾತ್ರವಲ್ಲದೇ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನೂ ಬಿಡದೆ ಪೊಲೀಸರು ಬಸ್‌ಗಳಲ್ಲಿ ಎಳೆದೊಯ್ದಿದ್ದಾರೆ. ಈ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಬಹಳಷ್ಟು ಟೀಕೆಗೆ ಗ್ರಾಸವಾಗುತ್ತಿದೆ.