ಸಿಇಟಿ ಪರೀಕ್ಷೆ: ಮೊದಲ ದಿನ ಸುಸೂತ್ರ

Prasthutha|

ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ. 80.95 & 96.06ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎರಡನೇ ದಿನವಾದ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಶನಿವಾರದಂದು ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಆಯ್ದ ಆರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ



Join Whatsapp