ಎದೆಹಾಲು ಉಣಿಸುವ ವೇಳೆ ಉಸಿರುಗಟ್ಟಿ 6 ತಿಂಗಳ ಮಗು ಸಾವು

Prasthutha|

ಕಾಸರಗೋಡು: ಎದೆ ಹಾಲು ಗಂಟಲಿಗೆ ಸಿಲುಕಿ ಆರು ತಿಂಗಳ ಕಂದಮ್ಮ ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಪಟ್ಲಾದಲ್ಲಿ ನಡೆದಿದೆ.
ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಯುಪಿ ಮೂಲದ ಅಫ್ತಾಬ್ ಅವರ ಪುತ್ರಿ ಇನಾಯ್ ಖಾತೂನ್ ಮೃತಪಟ್ಟ ಮಗು.

- Advertisement -

ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ವಿದ್ಯಾನಗರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಜೆ ವೇಳೆಗೆ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

- Advertisement -

ಮೃತದೇಹವನ್ನು ಯುಪಿಗೆ ಕೊಂಡೊಯ್ಯಲು ಸಂಬಂಧಿಕರು ಸಿದ್ಧತೆ ನಡೆಸಿದ್ದಾರೆ. ದಂಪತಿಗೆ ಇನ್ನೊಂದು ಮಗುವಿದೆ.



Join Whatsapp