ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಸತ್ಯೇಂದ್ರ ಜೈನ್’ಗೆ ಮತ್ತೆ ಜಾಮೀನು ನಿರಾಕರಣೆ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕರಿಸಿದೆ.

- Advertisement -

2015 – 16ರ ಸಾಲಿನಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವಹಿವಾಟಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜೈನ್ ಅವರನ್ನು ಕಳೆದ ತಿಂಗಳು ಬಂಧಿಸಿತ್ತು.

ಈ ಮಧ್ಯೆ ಕೇಂದ್ರೀಯ ತನಿಖಾ ದಳ (ಸಿಬಿಐ) ಜೈನ್ ಮತ್ತು ಕುಟುಂಬದ ವಿರುದ್ಧ ಆಗಸ್ಟ್ 2017 ರಲ್ಲಿ 1.62 ಕೋಟಿ ರೂ. ವರೆಗಿನ ಅಕ್ರಮ ಹಣ ವರ್ಗಾವಣೆ ಆರೋಪದ ಆಧಾರದಲ್ಲಿ ಪ್ರಕರಣ ದಾಖಲಿಸಿತ್ತು.

- Advertisement -

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು.



Join Whatsapp