ಅಗ್ನಿಪಥ್ ಪ್ರತಿಭಟನೆ: ಮೃತರ ಕುಟುಂಬಕ್ಕೆ 25 ಲಕ್ಷ ರೂ., ಸರ್ಕಾರಿ ಉದ್ಯೋಗ ಘೋಷಿಸಿದ ತೆಲಂಗಾಣ ಸಿಎಂ

Prasthutha|

ಹೈದರಾಬಾದ್ : ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಹಿಂಸಾತ್ಮಕ ಪ್ರತಿಭಟನೆ ಮತ್ತು ಪೊಲೀಸರ ಘರ್ಷಣೆಯ ಸಮಯದಲ್ಲಿ ಮೃತಪಟ್ಟ ದಾಮಿರಾ ರಾಕೇಶ್ (24) ಅವರ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು 25 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ, ಕುಟುಂಬದ ಅರ್ಹ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗದ ಭರವಸೆಯನ್ನೂ ನೀಡಿದ್ದಾರೆ.

- Advertisement -

ಅಗ್ನಿಪಥ್ ಹೆಸರಿನಲ್ಲಿ ಕೇಂದ್ರ ಸರ್ಕಾರವು ಸೇನಾ ಸೇವೆಗಳಿಗೆ ನೇಮಕಾತಿಯನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾಗ ರೈಲ್ವೆ ಪೊಲೀಸ್ ಗೋಲಿಬಾರ್ ನಲ್ಲಿ ವಾರಂಗಲ್ ಮೂಲದ ರಾಕೇಶ್ ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್  ಸಂತಾಪ ಸೂಚಿಸಿದರು.

ಕೇಂದ್ರ ಸರ್ಕಾರ ಅಳವಡಿಸಿಕೊಂಡ ತಪ್ಪು ನೀತಿಗಳಿಗೆ ಬಲಿಯಾಗಿದ್ದಾರೆ ಎಂದು ಶುಕ್ರವಾರ ತಡರಾತ್ರಿಯ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.



Join Whatsapp