ಅಗ್ನಿಪಥ ಹಿಂಸಾಚಾರ: ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

Prasthutha|

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಸೇನೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ನೌಕಾಪಡೆ ಮತ್ತು ವಾಯುಪಡೆಯ ಅಗ್ನಿಪಥ ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ಉಂಟಾಗಿರುವ ಪ್ರಕ್ಷುಬ್ದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವರ ಈ ಸಭೆ ಸಾಕಷ್ಟು ಮಹತ್ವ ಪಡೆದಿದೆ.

- Advertisement -

ಸಭೆಯಲ್ಲಿ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಮತ್ತು ಸೇನಾಪಡೆಯ ಉಪ ಮುಖ್ಯಸ್ಥ ಜನರಲ್ ಬಿ.ಎಸ್. ರಾಜು ಉಪಸ್ಥಿತರಿದ್ದರು.

ಅಗ್ನಿಪಥ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವುದು ಮತ್ತು ಪ್ರತಿಭಟನಕಾರರನ್ನು ಸಮಾಧಾನಪಡಿಸುವ ಮಾರ್ಗಗಳನ್ನು ಕಂಡುಕೊಳ್ಳಲು ವಿಶೇಷವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

ಸಭೆಗೆ ಗೈರು ಹಾಜರಾದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕರ್ತವ್ಯದ ಪ್ರಯುಕ್ತ ಹೈದರಾಬಾದ್ ಪ್ರವಾಸದಲ್ಲಿದ್ದಾರೆ.

ಸೇನೆ, ನೌಕಾಪಡೆ ಮತ್ತು ವಾಯುಸೇನೆ ಶುಕ್ರವಾರ ಮುಂದಿನ ವಾರದೊಳಗೆ ನೂತನ ಮಾದರಿಯಲ್ಲಿ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಘೋಷಿಸಿವೆ.

ನೂತನ ಯೋಜನೆ ಅಡಿಯಲ್ಲಿ ನೇಮಕಾತಿಗಾಗಿ ಭಾರತೀಯ ವಾಯುಪಡೆಯ ಆಯ್ದೆ ಪ್ರಕ್ರಿಯೆಯು ಜೂನ್ 24 ರಿಂದ ಪ್ರಾರಂಭವಾಗಲಿದೆ ಎಂದು ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ತಿಳಿಸಿದ್ದಾರೆ ಮತ್ತು ಎರಡು ದಿನಗಳಲ್ಲಿ ಆರಂಭಿಕ ವ್ಯಾಯಾಮವನ್ನು ಪ್ರಾರಂಭಿಸುವುದಾಗಿ ಸೇನೆ ತಿಳಿಸಿದೆ.

ಸೇನೆಯು ವಾರ್ಷಿಕವಾಗಿ 50,000 ರಿಂದ 60,000 ಸೈನಿಕರನ್ನು ವಾರ್ಷಿಕವಾಗಿ ನೇಮಿಸಿಕೊಳ್ಳುತ್ತದೆ. ಆದಾಗ್ಯೂ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ನೇಮಕಾತಿ ನಡೆಯಲು ಸಾಧ್ಯವಾಗಿರಲಿಲ್ಲ.



Join Whatsapp