ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿದಂತೆ ಹಲವರಿಗೆ ಗಾಯ

Prasthutha|

ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗುಂಡು ಹಾರಿಸಿದವರಲ್ಲಿ ಒಬ್ಬ ಹದಿಹರೆಯದವನಾಗಿದ್ದು, ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

- Advertisement -

ಯು ಸ್ಟ್ರೀಟ್ ನ ಮೊಚೆಲ್ಲಾ ಸಂಗೀತ ಕಾರ್ಯಕ್ರಮದಲ್ಲಿ ಘಟನೆ ನಡೆದಿದ್ದು, ಈ ಪ್ರದೇಶ ಶ್ವೇತಭವನದಿಂದ ಕೇವಲ 2 ಮೈಲಿ ದೂರವಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಘಟನೆ ನಡೆದ ಪ್ರದೇಶದಲ್ಲಿ ಜನರು ಓಡಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಅಮೆರಿಕದಲ್ಲಿ ಹೆಚ್ಚುತ್ತಿರುವ ಗುಂಡಿನ ದಾಳಿಗೆ ಕಡಿವಾಣ ಹಾಕಲು ಬಂದೂಕಿನ ಪರವಾನಗಿ ನೀಡುವ ವಯಸ್ಸಿನ ಮಿತಿಯನ್ನು ಹೆಚ್ಚಿಸಿದೆ. ಮಕ್ಕಳು ಹಾಗೂ ಕುಟುಂಬಗಳನ್ನು ರಕ್ಷಿಸುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಂದೂಕು ಕೊಳ್ಳುವವರ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಿದ್ದಾರೆ.



Join Whatsapp