ಸಮುದ್ರತಟದಲ್ಲಿ ಜಂಪಿಂಗ್ ವೇಳೆ ಅವಘಡ: ನಟ ದಿಗಂತ್ ಸ್ಥಿತಿ ಗಂಭೀರ

Prasthutha|

ಗೋವಾ: ಸ್ಯಾಂಡಲ್’ವುಡ್ ನಟ ದಿಗಂತ್’ಗೆ ಬೆನ್ನು ಮೂಳೆಗೆ ಬಲವಾದ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬಸ್ಥರೊಂದಿಗೆ ಗೋವಾ ಪ್ರವಾಸದಲ್ಲಿದ್ದ ನಟ ದಿಗಂತ್, ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ಬೆನ್ನುಮೂಳೆಗೆ ಬಲವಾದ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

- Advertisement -

ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಿಗಂತ್ ಅವರನ್ನು ಬೆಂಗಳೂರಿಗೆ ಏರ್’ಲಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ದಿನಗಳ ಹಿಂದಷ್ಟೆ ನಟ ದಿಗಂತ್ ಮತ್ತವರ ಕುಟುಂಬ ಗೋವಾಗೆ ಟ್ರಿಪ್ ಹೋಗಿದ್ದರು. ಈ ವೇಳೆ ಸಮುದ್ರ ತೀರದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ಈ ಅವಘಡ ಸಂಭವಿಸಿದೆ



Join Whatsapp