ಕೋಟ್ಯಂತರ ರೂ. ವಂಚನೆ ಪ್ರಕರಣ: ಚಿಟ್ ಫಂಡ್ ಕಂಪನಿ ಮಾಲಕಿ ಸೆರೆ

Prasthutha|

- Advertisement -

ಬೆಂಗಳೂರು: ವೃದ್ಧರೊಬ್ಬರಿಗೆ ಕಡಿಮೆ‌ ಅವಧಿಯಲ್ಲಿ ಹೆಚ್ಚಿನ ಲಾಭಾಂಶ ಗಳಿಸಬಹುದು ಎಂದು ಆಸೆ ತೋರಿಸಿ, ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ನಂತರ ಬಡ್ಡಿ ಹಾಗೂ ಅಸಲು ಹಣವನ್ನು ನೀಡದೆ ಪರಾರಿಯಾಗಿದ್ದ ಚಿಟ್ ಫಂಡ್ ಕಂಪನಿ ಮಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀವಾಣಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.‌

- Advertisement -

ಕೆಲ ವರ್ಷಗಳ ಹಿಂದೆ ಲಗ್ಗೆರೆಯಲ್ಲಿ ವಾರಿಧಿ ಚಿಟ್ ಫಂಡ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಲಕ್ಷ್ಮೀ ಪ್ರಾರಂಭಿಸಿದ್ದರು. ವೃದ್ಧರನ್ನೇ ಟಾರ್ಗೆಟ್ ಮಾಡುತ್ತಿದ್ದ ಲಕ್ಷ್ಮೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭಾಂಶಗಳಿಸಬಹುದು ಎಂದು ಆಸೆ ತೋರಿಸಿ ಅವರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು.

ಕಳೆದ ವರ್ಷ ಇದೇ ಮಾದರಿಯಲ್ಲಿ ಬೃಂದಾವನ ಚಿಟ್ ಫಂಡ್ ಕಂಪನಿ ವಂಚನೆ ಬೆಳಕಿಗೆ ಬಂದ ನಂತರ ಎಚ್ಚೆತ್ತುಕೊಂಡ ಗ್ರಾಹಕರು, ರಾಜಾಜಿನಗರ ಪೊಲೀಸ್ ಠಾಣೆಗೆ ಈ ಚಿಟ್ ಫಂಡ್ ವಿಚಾರವಾಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ಬಂದಿಸಿದ್ದಾರೆ.



Join Whatsapp