ನವದೆಹಲಿ: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇ.ಡಿ. ಮೂಲಕ ಕಿರುಕುಳ ನೀಡುತ್ತಿರುವ ಹಾಗೂ ಅಗ್ನಿಪಥ್ ಯೋಜನೆ ಮೂಲಕ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಬೆಂಕಿಯಿಡಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಎಐಸಿಸಿ ಕಚೇರಿ ಆವರಣದಲ್ಲಿ ಬುಧವಾರ ಎಐಸಿಸಿ ಪ್ರತಿಭಟನೆ ನಡೆಸಿತು.
ಪ್ರತಿಭಟನಾ ಸಭೆಯಲ್ಲಿ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ. ಸಿ. ವೇಣುಗೋಪಾಲ್, ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ ಮತ್ತಿತರ ಮುಖಂಡರು ಭಾಗವಹಿಸಿದ್ದರು.