ಪ್ರವಾದಿ ನಿಂದನೆಯಿಂದ ಭಾರತದ ವರ್ಚಸ್ಸಿಗೆ ಧಕ್ಕೆಯಾಗಿರುವುದು ನಿಜ: ಭದ್ರತಾ ಸಲಹೆಗಾರ ಅಜಿತ್ ದೋವಲ್

Prasthutha|

ನವದೆಹಲಿ: ಪ್ರವಾದಿ ವಿರುದ್ಧ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ನೀಡಿದ ಅವಹೇಳನಕಾರಿ ಹೇಳಿಕೆಯಿಂದ ಭಾರತದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಆದರೆ ಭಾರತದ ಬಗ್ಗೆ ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುತ್ತಿರುವುದು ಸರಿಯಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.

- Advertisement -

ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಶಿಸ್ತು ಕ್ರಮಕ್ಕೊಳಗಾಗಿದ್ದು, ಅವರಿಬ್ಬರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಸುದ್ದಿಸಂಸ್ಥೆಯಲ್ಲಿ ಮಾತನಾಡಿದ ಅವರು, ಪ್ರವಾದಿ ನಿಂದನೆಯಿಂದ ಭಾರತದ ವರ್ಚಸ್ಸಿಗೆ ಧಕ್ಕೆಯಾಗಿದೆ. ಆದರೆ ಈ ಸಮಯದಲ್ಲಿ ಭಾರತದ ವಿರುದ್ಧ ಸಾಕಷ್ಟು ತಪ್ಪು ಮಾಹಿತಿಗಳನ್ನು ಹರಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾಗಿದೆ. ಬಹುಶಃ ಈ ಪರಿಸ್ಥಿತಿಯಲ್ಲಿ ನಾವು ಅವರಿಗೆ ಧೈರ್ಯ ತುಂಬಿದ್ದೇವೆ ಎಂದು ಅವರು ತಿಳಿಸಿದ್ದಾರೆ.

- Advertisement -

ಪ್ರವಾದಿ ವಿರುದ್ಧದ ಟೀಕೆಗೆ ದೇಶ ವಿದೇಶಗಳಲ್ಲಿ ಭಾರತ ಸರ್ಕಾರ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಭಾರತದ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಉಂಟಾಗಿತ್ತು. ಮತ್ತೊಂದೆಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತೀವ್ರ ಮುಜುಗರಕ್ಕೊಳಗಾದ ಬಳಿಕ ಅಜಿತ್ ದೋವಲ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಇತ್ತೀಚೆಗೆ ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ನಡೆದ ಸ್ಫೋಟದ ಕುರಿತ ಪ್ರತಿಕ್ರಿಯಿಸಿದ ಅಜಿತ್ ದೋವಲ್, ಈ ಪರಿಸ್ಥಿತಿಯಲ್ಲಿ ನೆರವನ್ನು ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದ್ದಾರೆ.



Join Whatsapp