ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ

Prasthutha|

ನವದೆಹಲಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

- Advertisement -

ಅನಾರೋಗ್ಯದ ಬಗ್ಗೆ ಸೋನಿಯಾ ಗಾಂಧಿ ಇಡಿಗೆ ವಿಚಾರಣೆಯನ್ನು ಮುಂದೂಡುವಂತೆ ಪತ್ರ ಬರೆದಿದ್ದರು. ಅವರ ಮನವಿಗೆ ತನಿಖಾ ಸಂಸ್ಥೆ ಒಪ್ಪಿಗೆ ಸೂಚಿಸಿದೆ.

ಜೂನ್ 12 ರಂದು ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಕೆಲ ದಿನಗಳ ನಂತರ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಶಿಲೀಂದ್ರ ಸೋಂಕು ತಗುಲಿದ್ದು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಸದ್ಯ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು,  ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.



Join Whatsapp