ದ್ರೌಪದಿ ಮುರ್ಮ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ: ಎಂ.ಪಿ.ಕುಮಾರಸ್ವಾಮಿ ಅಭಿನಂದನೆ

Prasthutha|

ಬೆಂಗಳೂರು: ಒರಿಸ್ಸಾ ಮೂಲದ ಆದಿವಾಸಿ ಬುಡಕಟ್ಟು ಮಹಿಳೆಯೊಬ್ಬರನ್ನು ರಾಷ್ಟ್ರದ ರಾಷ್ಟ್ರಪತಿ  ಅಭ್ಯರ್ಥಿಯನ್ನಾಗಿ ಪಕ್ಷ ಘೋಷಣೆ ಮಾಡಿರುವುದಕ್ಕೆ ಅನುಸೂಚಿತ ಜಾತಿ, ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಇದೇ ಮೊಟ್ಟ ಮೊದಲ ಬಾರಿಗೆ ಅದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯಾದ ಒರಿಸ್ಸಾ ಮೂಲದ ದ್ರೌಪದಿ ಮುರ್ಮ ಅವರನ್ನು ಭಾರತ ದೇಶದ ರಾಷ್ಟ್ರಪತಿಗಳನ್ನಾಗಿ ಮಾಡಿ ಸಮಾಜಿಕ ನ್ಯಾಯ ಒದಗಿಸಿ ಸಂವಿಧಾನದ ಆಶಯಗಳನ್ನು ಈಡೇರಿಸಿರುವ    ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಗೃಹ ಸಚಿವ, ರಾಷ್ಟ್ರೀಯ ನಾಯಕ ಅಮಿತ್ ಶಾ, ಎನ್ ಡಿ ಎ ಮಿತ್ರ ಪಕ್ಷಗಳ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp