ಜಮ್ಮು & ಕಾಶ್ಮೀರ : ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷಾಂತ್ಯಕ್ಕಿಂತ ಮೊದಲು ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಹಾಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸ್ಥಾನಕ್ಕೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇಮಕಗೊಳ್ಳುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಲೆಫ್ಟಿನೆಂಟ್ ಗವರ್ನರ್ ಹುದ್ದೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಬಿಜೆಪಿಯು ನಖ್ವಿಗೆ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ ಎಂದೂ ಉನ್ನತ ಮೂಲಗಳು ತಿಳಿಸಿವೆ.