ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ 858 ಮಂದಿಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಲ್ಲದೆ ರಾಜ್ಯದಲ್ಲಿ ಓರ್ವ ಕೊರೊನಾದಿಂದ ಮೃತಪಟ್ಟಿದ್ದಾರೆ.
ಇಂದು 682 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,18,452 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 36,289 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ,
ಸದ್ಯ 5067 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಓರ್ವ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು 40072 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ.2.36 ಇದ್ದು, ಮೃತರ ಪ್ರಮಾಣ ಶೇ.0.11 ರಷ್ಟಿದೆ ಎಂದು ತಿಳಿದು ಬಂದಿದೆ.