ಮುಲ್ಕಿ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

Prasthutha|

ಮುಲ್ಕಿ: ದ್ವಿಚಕ್ರ ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು ಮುಲ್ಕಿ ಕೊಲಕಾಡಿ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ.

- Advertisement -

ಮೃತ ಮನೀಶ್ ಹಾಗೂ ಗಾಯಾಳು  ದೀಕ್ಷಿತ್ ಇಬ್ಬರೂ ಮುಲ್ಕಿ ವಿಜಯ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ದೀಕ್ಷಿತ್ ನ ಕಾಲಿನ ಭಾಗಕ್ಕೆ ಗಂಭೀರ  ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳು ಅತೀ ವೇಗದಿಂದ ವಾಹನ ಚಲಾಯಿಸಿದ ಕಾರಣದಿಂದಾಗಿ ಪರಸ್ಪರ ಡಿಕ್ಕಿ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.



Join Whatsapp