ಅಜ್ಜಂಪುರ: ಜಿಲ್ಲಾ ಮಟ್ಟದ ಕಾಂಗ್ರೆಸ್ ನವಸಂಕಲ್ಪ ಚಿಂತನಾ ಶಿಬಿರವನ್ನು ಇದೇ 28ರಂದು ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಅಂಶುಮಂತ್ ತಿಳಿಸಿದ್ದಾರೆ.
ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಎಐಸಿಸಿ ಮತ್ತು ಕೆಪಿಸಿಸಿ ಸೂಚನೆ ಹಿನ್ನೆಲೆಯಲ್ಲಿ ಚಿಂತನಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲೆಯ 300ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ, ಮಾಜಿ ಶಾಸಕರಾದ ಎಸ್.ಎಂ.ನಾಗರಾಜ್, ಟಿ.ಎಚ್. ಶಿವಶಂಕರಪ್ಪ, ಜಿ.ಎಚ್.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಕುಶ್ ಆನಂದ್ ಕುಮಾರ್, ಪುರಸಭೆ ಅಧ್ಯಕ್ಷ ಕೆ.ಪಿ.ಗೋಪಿನಾಥ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸಂತೋಷ್, ಜಿ.ನಟರಾಜ್, ಲೋಹಿತ್, ಮಂಜುನಾಥ್ ಉಪಸ್ಥಿತರಿದ್ದರು.