ರಾಂಚಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಖುಂಟಿಯಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಶಿಬಿರಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಆಹ್ವಾನಿಸದ ಕಾರಣ ಆರೋಗ್ಯ ಸಚಿವ ಬನ್ನಾ ಗುಪ್ತಾ ಆ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ.
ರಾಜ್ಯದ ಸಿಎಂ ಹೇಮಂತ್ ಸೊರೇನ್ ಅವರ ಹೆಸರು ಕಾರ್ಯಕ್ರಮದ ಪೋಸ್ಟರ್ ನಲ್ಲಿ ಕಂಡು ಬರದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದೇನೆ ಎಂದು ಗುಪ್ತಾ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಗುಪ್ತಾ, “ನಾವು ಖುಂಟಿಯ ಆರೋಗ್ಯ ಶಿಬಿರಕ್ಕೆ ಹೋಗಿದ್ದೆವು. ಇದು ಕೇಂದ್ರವು ನಡೆಸಿದ ಬೃಹತ್ ಶಿಬಿರವಾಗಿದ್ದು, ದೇಶದಲ್ಲಿ ಒಕ್ಕೂಟ ವ್ಯವಸ್ಥೆ ಇದೆ. ಆದರೆ ಅವರು ರಾಜ್ಯದ ಮುಖ್ಯಮಂತ್ರಿಯ ಚಿತ್ರವನ್ನು ಸಹ ಹಾಕಲಿಲ್ಲ. ಇದು ರಾಜಕೀಯ. ಅದಕ್ಕಾಗಿಯೇ ನಾನು ಕಾರ್ಯಕ್ರಮವನ್ನು ಬಹಿಷ್ಕರಿಸಿದೆ” ಎಂದು ತಿಳಿಸಿದರು.
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ರಾಜ್ಯಪಾಲ ರಮೇಶ್ ಬೈಸ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.