ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ವಿಪಕ್ಷ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ಇಂದು ಸಂಸತ್ತಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಈ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಡಿಎಂಕೆಯ ಎ.ರಾಜಾ, ಫಾರೂಕ್ ಅಬ್ದುಲ್ಲಾ ಮತ್ತು ಸಮಾಜವಾದಿ ಪಕ್ಷ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರತಿಪಕ್ಷಗಳ ಹಲವು ಮುಖಂಡರು ಉಪಸ್ಥಿತರಿದ್ದರು.

ಸಿನ್ಹಾ ಅವರು ಚುನಾವಣಾಧಿಕಾರಿ, ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರಿಗೆ ನಾಮಪತ್ರವನ್ನು ಹಸ್ತಾಂತರಿಸಿದರು.

- Advertisement -

ಜೂನ್ 21 ರಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

NDA ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.



Join Whatsapp